ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಭಾನುವಾರದ‌‌ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

Last Updated 26 ಜುಲೈ 2020, 6:52 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಭಾನುವಾರದ ಲಾಕ್‌ಡೌನ್‌ನಿಂದ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಶಿವರಾಮಪೇಟೆಗಳಲ್ಲಿ ಜನಸಂಚಾರ ವಿರಳವಾಗಿದೆ.

ದೊಡ್ಡಗಡಿಯಾರ, ಆಲ್ಬರ್ಟ್ ವಿಕ್ಟರ್ ರಸ್ತೆ, ಹಾರ್ಡಿಂಜ್‌ವೃತ್ತಗಳಲ್ಲಿ ಬಿಕೊ ಎನ್ನುವ ವಾತಾವರಣ ಇದೆ.

ಬೋಟಿ ಬಜಾರ್ ನ ಅಂಗಡಿಯೊಂದರ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಬೋಟಿ ಬಜಾರ್ ಬಹುತೇಕ ಅಂಗಡಿಗಳು ಮುಚ್ಚಿವೆ. ಮಾಂಸ ಖರೀದಿಗಾಗಿ ಬಂದ ಜನ ವಾಪಸ್ಸಾದರು.

ಕೆಲವೆಡೆ ದಿನಸಿ ಅಂಗಡಿಗಳು ವಹಿವಾಟು ನಡೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT