ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪತ್ತು ನಿರ್ವಹಣಾ ಪ್ರಾಧಿಕಾರ ಚುರುಕಾಗಲಿ: ಹೈಕೋರ್ಟ್

Last Updated 13 ಜುಲೈ 2020, 16:21 IST
ಅಕ್ಷರ ಗಾತ್ರ

ಬೆಂಗಳೂರು: 'ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಗಳನ್ನೇ ನಡೆಸದೆ ಹೋದರೆ ಉತ್ತಮ ಕಾರ್ಯ ನಿರ್ವಹಣೆ ಹೇಗೆ ಸಾಧ್ಯ' ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ಈ ಕುರಿತಂತೆ ಎ. ಮಲ್ಲಿಕಾರ್ಜುನ ಹಾಗೂ ಹೈಕೋರ್ಟ್ ಕಾನೂನು ಸೇವಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

'ವಿಪತ್ತು ನಿರ್ವಹಣಾ ಪ್ರಾಧಿಕಾರವು ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಸಭೆ ನಡೆಸಿಲ್ಲ' ಎಂಬ ಸರ್ಕಾರದ ವಿವರಣೆಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

'ಕೊರೊನಾ ಸೋಂಕು ಹೆಚ್ಚುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆರಡು ಸಭೆಗಳನ್ನು ಮಾತ್ರ ನಡೆಸಲಾಗಿದೆ. ಇದು ತರವಲ್ಲ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ, ಮುಂದಿನ ವಿಚಾರಣೆ ವೇಳೆಗೆ ಈ ಕುರಿತು ಸ್ಪಷ್ಟನೆ ನೀಡಬೇಕು' ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT