ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಪಾಲಿಸದ ಗಣ್ಯರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

Last Updated 17 ಜುಲೈ 2020, 20:13 IST
ಅಕ್ಷರ ಗಾತ್ರ

ಬೆಂಗಳೂರು: ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವ ಗಣ್ಯರು ಮತ್ತು ಪ್ರಭಾವಿಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

‘ಕಾಯ್ದೆ ಉಲ್ಲಂಘನೆ ಮಾಡಿರುವರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಜು.24ರೊಳಗೆ ವರದಿ ಸಲ್ಲಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ತಿಳಿಸಿದೆ.

‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಆಯೋಜಿಸಿದ್ದ ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ರಾಜಕೀಯ ಪಕ್ಷವೊಂದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲೂ ಅಂತರ ಕಾಯ್ದುಕೊಳ್ಳುವ ನಿಯಮ ಪಾಲನೆಯಾಗಿಲ್ಲ’ ಎಂದು ಚಿತ್ರಗಳ ಸಹಿತವಕೀಲ ಜಿ.ಆರ್. ಮೋಹನ್ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT