ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸ್‌ ಉಗ್ರರನ್ನು ಮಟ್ಟ ಹಾಕುತ್ತೇವೆ: ಬಸವರಾಜ ಬೊಮ್ಮಾಯಿ

Last Updated 26 ಜುಲೈ 2020, 17:00 IST
ಅಕ್ಷರ ಗಾತ್ರ

ಬೆಂಗಳೂರು: ಐಸಿಸ್ ಹಾಗೂ ಇತರೆ ಸಂಘಟನೆಗಳ ಉಗ್ರರನ್ನು ಮಟ್ಟಹಾಕಲು ನಾವೂ ಕೆಲಸ ಮಾಡುತ್ತಿದ್ದೇವೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ ಎನ್ಐಎ ಜೊತೆಯಲ್ಲಿ ಸಂಪರ್ಕದಲ್ಲಿದ್ದು, ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಭಾರತದಲ್ಲಿ ಉಗ್ರ ಚಟುವಟಿಕೆಗಳಿಗೆ ಸಂಚು ನಡೆಯುತ್ತಿದೆ ಎಂಬ ವಿಶ್ವಸಂಸ್ಥೆ ವರದಿಗೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, 'ಕೇರಳ ಹಾಗೂ ಕರ್ನಾಟಕದಲ್ಲಿ ಉಗ್ರರ ಕೃತ್ಯದ ಬಗ್ಗೆ ವರದಿಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ನಾವು ಎನ್ಐಎ ಜೊತೆ ಕೆಲಸ ಮಾಡುತ್ತಿದ್ದೇವೆ. ಬೆಂಗಳೂರು, ಉಡುಪಿಯಲ್ಲಿ ಈಗಾಗಲೇ ಕೆಲ ಪ್ರಕರಣಗಳನ್ನು ಭೇದಿಸಲಾಗಿದೆ. ಉಗ್ರ ಚಟುವಟಿಕೆ ತಡೆಗೆ ಎಲ್ಲ ರೀತಿಯ ಕ್ರಮಗಳನ್ನು ನಮ್ಮ ಪೊಲೀಸರು ತೆಗೆದುಕೊಂಡಿದ್ದಾರೆ' ಎಂದರು.

'ಕೇವಲ ಎನ್ಐಎ ಮಾತ್ರವಲ್ಲದೇ, ಕೇರಳ, ತಮಿಳುನಾಡು, ತೆಲಂಗಾಣ ಪೊಲೀಸರ ಜೊತೆಯ ಸಂಪರ್ಕದಲ್ಲಿದ್ದೇವೆ. ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದೇವೆ' ಎಂದರು.

'ನಮ್ಮ ಕಾರ್ಯಾಚರಣೆ ಮೇಲೆಯೇ ವಿಶ್ವಸಂಸ್ಥೆ ವರದಿ ನೀಡಿದೆ. ರಾಜ್ಯದಲ್ಲಿ ಯಾವುದೇ ಉಗ್ರ ಚಟುವಟಿಕೆಗೆ ಅವಕಾಶ ಕೊಟ್ಟಿಲ್ಲ. ಮುಂದೆಯೂ ಕೊಡುವುದಿಲ್ಲ' ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT