ಮಂಗಳವಾರ, ಆಗಸ್ಟ್ 4, 2020
22 °C

ಹೂವಿನಹಡಗಲಿ ಶಾಸಕ ಪರಮೇಶ್ವರ ನಾಯ್ಕಗೆ ಕೋವಿಡ್‌-19 ಧೃಢ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹೂವಿನಹಡಗಲಿ: ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರಿಗೆ ಗುರುವಾರ ಕೋವಿಡ್‌ ದೃಢಪಟ್ಟಿದ್ದು, ಹರಪನಹಳ್ಳಿಯ ಅವರ ಮನೆಯನ್ನು ಅಲ್ಲಿನ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.

‘ಕೆಲವು ದಿನಗಳಿಂದ ಅನಾರೋಗ್ಯದಿಂದ ಅವರು ಹರಪನಹಳ್ಳಿಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಈಚೆಗೆ ಹರಪನಹಳ್ಳಿಯ ಆಸ್ಪತ್ರೆಯಲ್ಲೇ ತಪಾಸಣೆಗೆ ಒಳಗಾಗಿದ್ದರು. ಗುರುವಾರ ಅವರ ವೈದ್ಯಕೀಯ ವರದಿ ಪಾಸಿಟಿವ್ ಬಂದಿದೆ.

ಬೆನ್ನು ನೋವಿನ ಚಿಕಿತ್ಸೆಗಾಗಿ ಅವರು ಬುಧವಾರವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗೊತ್ತಾಗಿದೆ.

‘ಪರಮೇಶ್ವರ ನಾಯ್ಕ ಅವರು 10-12 ದಿನಗಳಿಂದ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಪಟ್ಟಣದಲ್ಲಿರುವ ಅವರ ನಿವಾಸಕ್ಕೂ  ಬಂದಿಲ್ಲ. ಹೀಗಾಗಿ ಇಲ್ಲಿನ ಅವರ ಮನೆಯನ್ನು ಸೀಲ್ ಡೌನ್ ಮಾಡುವುದಿಲ್ಲ’ ಎಂದು ತಹಶೀಲ್ದಾರ್ ಕೆ.ವಿಜಯಕುಮಾರ್ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು