ಬುಧವಾರ, ಜುಲೈ 28, 2021
29 °C

ಕೆಲ ಪ್ರಮುಖ ವಿಚಾರಗಳನ್ನು ರಾಜ್ಯದ ಜನರಿಗೆ ತಿಳಿಸಲಿದ್ದೇನೆ: ಸಿದ್ದರಾಮಯ್ಯ ಟ್ವೀಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಜನರಿಗೆ ಗುರುವಾರ ಕೆಲವು ಪ್ರಮುಖ ವಿಷಯಗಳನ್ನು ಗಮನಕ್ಕೆ ತರಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಟ್ವೀಟ್‌ ಮಾಡಿದ್ದಾರೆ.

‘ಗುರುವಾರ ಬೆಳಿಗ್ಗೆ 11 ಗಂಟೆಗೆ ಮಾಧ್ಯಮದ ಮೂಲಕ ಕೆಲವು ಪ್ರಮುಖ ವಿಚಾರಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲಿದ್ದೇನೆ. ಈ ಪತ್ರಿಕಾ ಸಂವಾದ ಫೇಸ್ ಬುಕ್ ಹಾಗೂ ಟ್ವಿಟ್ಟರ್‌ನಲ್ಲಿ ನೇರಪ್ರಸಾರವಾಗಲಿದೆ,’ ಎಂದು ಅವರು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ತಾವು ನಡೆಸುವ ಮಾಧ್ಯಮ ಸಂವಾದ, ಸುದ್ದಿಗೋಷ್ಠಿಗಳ ಕುರಿತು ಟ್ವಿಟರ್‌ನಲ್ಲಿ ಮೊದಲೇ ತಿಳಿಸಿರುವುದು ಅಪರೂಪ. ಹೀಗಾಗಿ ಅವರ ಇಂದಿನ ಸುದ್ದಿಗೋಷ್ಠಿ ಸಹಜವಾಗಿಯೇ ಗಮನ ಸೆಳೆದಿದೆ. ಕುತೂಹಲಕ್ಕೂ ಕಾರಣವಾಗಿದೆ.

ಕೋವಿಡ್‌–19 ವ್ಯಾಪಕವಾಗುತ್ತಿರುವ ಹೊತ್ತಿನಲ್ಲಿ ಅವರು ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮವಾಗಿದೆ ಎಂದು ಸುದ್ದಿಗೋಷ್ಠಿಗಳ ಮೂಲಕ ಆರೋಪಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು