ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ–ಸೆಟ್) ಆಗಸ್ಟ್ 30 ಅಥವಾ ಸೆಪ್ಟೆಂಬರ್ 9ರಂದು ನಡೆಸಲು ಅನುಮತಿ ಕೋರಿ ಮೈಸೂರು ವಿಶ್ವವಿದ್ಯಾಲಯವು ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ.

‘ಕೆ–ಸೆಟ್ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು ಸೂಚಿಸಿರುವ ಹಿನ್ನೆಲೆಯಲ್ಲಿ ಈ ದಿನಾಂಕಗಳಂದು (ಆ.30 ಅಥವಾ ಸೆ.9) ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಹೇಳಿದ್ದಾರೆ.

‘ಮೊದಲು ಆ.6ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು ಜುಲೈನಲ್ಲಿ ಯಾವುದೇ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಬಾರದು ಎಂದು ಸೂಚಿಸಿದೆ. ಅಲ್ಲದೆ, ಯುಜಿಸಿಯು ಪದವಿ, ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ಪರೀಕ್ಷೆಗಳನ್ನು ಎಲ್ಲ ವಿಶ್ವವಿದ್ಯಾಲಯಗಳು ಅಥವಾ ಶಿಕ್ಷಣ ಸಂಸ್ಥೆಗಳು ಸೆಪ್ಟೆಂಬರ್ನೊಳಗೆ ನಡೆಸಬೇಕು ಎಂದು ಸೂಚಿಸಿದೆ’ ಎಂದು ಅವರು ತಿಳಿಸಿದ್ದಾರೆ.

‘ಉಲ್ಲೇಖಿತ ದಿನಾಂಕಗಳಂದು ನಡೆಸಲು ಸಾಧ್ಯವಾಗದಿದ್ದರೆ, ವಿದ್ಯಾರ್ಥಿಗಳು ಒಂದು ವರ್ಷದ ಕೆ–ಸೆಟ್ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗುತ್ತಾರೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.