ಸೋಮವಾರ, ಸೆಪ್ಟೆಂಬರ್ 28, 2020
24 °C
ಸಂಪುಟ ಪುನಾರಚನೆ ಕುರಿತು ಚರ್ಚೆ?

ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪ: ಹಲವು ಊಹಾಪೋಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಊಹಾಪೋಹಗಳಿಗೆ ಕಾರಣವಾಗಿದೆ.

ಸಚಿವ ಸಂಪುಟ ಪುನಾರಚನೆ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಮುಖ್ಯಮಂತ್ರಿಯವರ ಈ ಭೇಟಿ ಮಹತ್ವ ಪಡೆದಿದೆ. ನಾಲ್ಕರಿಂದ ಐದು ಸಚಿವರನ್ನು ಕೈಬಿಟ್ಟು ಸಂಪುಟ ಪುನಾರಚನೆ ಕಸರತ್ತಿಗೆ ಒಪ್ಪಿಗೆ ಪಡೆಯಲು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಸಾಧ್ಯತೆ ಇದೆ. ಈ ಕುರಿತು ಯಡಿಯೂರಪ್ಪ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜ್ಯಪಾಲರ ಭೇಟಿ ವೇಳೆಯಲ್ಲಿ ಜತೆಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬಳಿಕ ಸುದ್ದಿಗಾರರ ಜತೆ ಮಾತನಾಡಿ,ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿಲ್ಲ. ಸ್ವಾತಂತ್ರ್ಯ ದಿನೋತ್ಸವ ಸಿದ್ಧತೆಗಳು, ಕೋವಿಡ್‌ ನಿರ್ವಹಣೆ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟದ ಜಾಲದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು