ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ನಿರ್ಧಾರ ಜಿಲ್ಲಾಡಳಿತಕ್ಕೆ ಬಿಡುವುದು ಸರಿಯಲ್ಲ: ಪ್ರಿಯಾಂಕ್‌ ಖರ್ಗೆ

Last Updated 13 ಜುಲೈ 2020, 11:02 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳವಾರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿ ಸರ್ಕಾರ ಈಗಾಗಲೇ ಪ್ರಕಟಿಸಿದೆ. ಉಳಿದ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಬಗ್ಗೆ ಆಯಾ ಜಿಲ್ಲಾಡಳಿತಗಳು ಉಸ್ತವಾರಿ ಸಚಿವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಈ ನಿರ್ಧಾರವನ್ನು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ವಿರೋಧಿಸಿದ್ದಾರೆ.

ಲಾಕ್‌ಡೌನ್‌ ಮಾಡುವ ನಿರ್ಧಾರವನ್ನು ಸರ್ಕಾರತ ಜಿಲ್ಲಾಡಳಿತಕ್ಕೆ ಬಿಡುವುದು ಸರಿಯಲ್ಲ ಎಂಬುದು ನನ್ನ ಭಾವನೆ. ಮುಖ್ಯಮಂತ್ರಿ ರಾಜ್ಯದ ದೃಷ್ಟಿಕೋನದಲ್ಲಿ ನಿರ್ಧಾರ ಕೈಗೊಳ್ಳಬೇಕು. ಕೊರೊನಾ ಲಾಕ್‌ಡೌನ್‌ಗೆ ಗೊತ್ತು ಗುರಿಯಿಲ್ಲದಂತೆ ಸ್ಥಳೀಯ ನಿರ್ಧಾರ ಸರಿಯಲ್ಲ ಎಂದು ಪ್ರಿಯಾಂಕ್‌ ಖರ್ಗೆ ಟ್ವೀಟಿಸಿದ್ದಾರೆ.

ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮಾಡುವುದಾಗಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಜಗದೀಶ ಶೆಟ್ಟರ್‌ ಪ್ರಕಟಿಸಿದ್ದಾರೆ. ಶಿವಮೊಗದಲ್ಲಿ ಪ್ರತಿ ದಿನ ಅರ್ಧ ದಿನಗಳ ಕಾಲ ಲಾಕ್‌ಡೌನ್‌ ಮಾಡಲು ತೀರ್ಮಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT