ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಹರಿಸುವಾಗ ನೆರೆ ರಾಜ್ಯಗಳಿಗೆ ತಿಳಿಸಬೇಕು: ಹೈಕೋರ್ಟ್

Last Updated 24 ಜುಲೈ 2020, 19:19 IST
ಅಕ್ಷರ ಗಾತ್ರ

ಬೆಂಗಳೂರು: ‘ಜಲಾಶಯಗಳಿಂದ ನದಿಗಳಿಗೆ ನೀರು ಬಿಡುಗಡೆ ಮಾಡವ ಬಗ್ಗೆ ನೆರೆ ರಾಜ್ಯಗಳಿಗೆ ಮಾಹಿತಿ ನೀಡುವ ಕುರಿತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು’ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಕುರಿತಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು.

‘ಜಲಾಶಯಗಳಿಂದ ನೀರು ಬಿಡುಗಡೆಯಾದಾಗ ತೊಂದರೆಗೆ ಸಿಲುಕಬಹುದಾದ ರಾಜ್ಯಗಳಿಗೆ ಮೊದಲೇ ಮಾಹಿತಿ ಇದ್ದರೆ ಮುನ್ನೆಚ್ಚರಿಕೆ ವಹಿಸಲು ಅನುಕೂಲವಾಗುತ್ತದೆ.ನಿರ್ದಿಷ್ಟ ಕಾರ್ಯವಿಧಾನ ರೂಪಿಸಿಕೊಳ್ಳುವಂತೆ ಈ ಹಿಂದಿನ ವಿಚಾರಣೆ ವೇಳೆ ತಿಳಿಸಿದ್ದರೂ, ಸಮಿತಿ ಕ್ರಮ ಕೈಗೊಂಡಿಲ್ಲ. ಆಗಸ್ಟ್ 7ರಂದು ವಿಚಾರಣೆಗೆ ಹಾಜರಾಗುವಾಗ ಈ ಸಂಬಂಧ ವರದಿ ಸಲ್ಲಿಸಬೇಕು’ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT