ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ | 7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’

Last Updated 29 ಜುಲೈ 2020, 20:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 30 ಮತ್ತು 31ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಗುರುವಾರ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳೂ ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ಚಾಮರಾಜನಗರ, ಕೋಲಾರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಮಳೆ-ಎಲ್ಲಿ, ಎಷ್ಟು? : ಬೀದರ್ ಜಿಲ್ಲೆಯ ಔರಾದ್‍ನಲ್ಲಿ ಗರಿಷ್ಠ 7 ಸೆಂ.ಮೀ ಮಳೆಯಾಗಿದೆ. ಕಂಪ್ಲಿ 5, ಶ್ರೀರಂಗಪಟ್ಟಣ 4, ಬೀದರ್ 3, ಮಂಗಳೂರು, ಕುಂದಾಪುರ, ಮೈಸೂರು, ಮಂಡ್ಯ, ಮಳವಳ್ಳಿ, ಮಾಗಡಿ 2, ಅಂಕೋಲಾ, ಮೂಡುಬಿದರೆ, ರಾಯಚೂರು, ಚಿಂಚೋಳಿ, ಕೊಳ್ಳೇಗಾಲ, ಗೌರಿಬಿದನೂರು, ಟಿ.ನರಸೀಪುರ, ಬೇಲೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT