ಗುರುವಾರ , ಜುಲೈ 29, 2021
21 °C

ಉದ್ಯಮಿ ರಾಜೇಂದ್ರ ಹಂಜಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕೆಎಲ್ಇ ಸಂಸ್ಥೆಯ ಉಪಾಧ್ಯಕ್ಷ, ಉದ್ಯಮಿ ರಾಜೇಂದ್ರ ಹಂಜಿ (58) ಶನಿವಾರ ಸಂಜೆ ನಿಧನರಾಗಿದ್ದಾರೆ. ಕೆಲವು ಕಾಲದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರಿಗೆ ಪತ್ನಿ ಹಾಗೂ ಮಗ ಇದ್ದಾರೆ.

ಇಲ್ಲಿನ ಹಿಂದವಾಡಿಯಲ್ಲಿ ಅವರು ವಾಸವಾಗಿದ್ದರು. ರಾಜೇಂದ್ರ ಹಂಜಿ ಅವರು ತಮ್ಮ ತಂದೆ ವಿ.ಸಿ.ಹಂಜಿ ಅವರ ನಿಧನದ ನಂತರ ಕೆಎಲ್ಇ ನಿರ್ದೇಶಕರಾಗಿದ್ದರು. ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಅವರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ಸ್ವಗ್ರಾಮ ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ನಡೆಯಲಿದೆ ಎಂದು ಸಮೀಪವರ್ತಿಗಳು ತಿಳಿಸಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು