ಶನಿವಾರ, ಸೆಪ್ಟೆಂಬರ್ 18, 2021
28 °C

ಬೆಂಗಳೂರಿನಿಂದ ಊರುಗಳಿಗೆ ಹೋಗುವವರಿಗಾಗಿ ಹೆಚ್ಚುವರಿ 800 ಬಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಿಂದ ಹೊರ ಜಿಲ್ಲೆಗಳಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಹೆಚ್ಚುವರಿಯಾಗಿ 800 ಬಸ್‌ಗಳ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಆರಂಭಿಸಿದೆ.

ಸೋಮವಾರ ಮತ್ತು ಮಂಗಳವಾರ ಎರಡೂ ದಿನ ಹೆಚ್ಚುವರಿ ಬಸ್‌ಗಳು ಬೆಂಗಳೂರಿನಿಂದ ಹೊರಡಲಿವೆ. ಸೋಮವಾರ ಬೆಳಿಗ್ಗೆ 11 ಗಂಟೆ ವೇಳೆಗೆ 333 ಬಸ್‌ಗಳಲ್ಲಿ 8,938 ಜನ ಹೊರ ಊರುಗಳಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಅಲ್ಲದೇ 231 ಬಸ್‌ಗಳಿಗೆ ಮುಂಗಡ ಬುಕ್ಕಿಂಗ್ ಆಗಿದೆ. ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನ್ ಮಾಡಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು