ಗುರುವಾರ , ಆಗಸ್ಟ್ 13, 2020
21 °C

ಕೈಗಾರಿಕೆಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ನೆರೆಯ ಜಿಲ್ಲೆಗಳಲ್ಲಿ ನಿರ್ಬಂಧಿತ ವಲಯಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆಗಳಲ್ಲಿ ಕೈಗಾರಿಕಾ ಘಟಕಗಳಿಗೆ ಕಾರ್ಯ ನಿರ್ವಹಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.

ಹೊಸ ಆದೇಶದಂತೆ ಬಹುತೇಕ ಎಲ್ಲ ಉದ್ಯಮಗಳಿಗೂ ಕಾರ್ಯಾಚರಣೆ ನಡೆಸಲು ಅವಕಾಶ ನೀಡಲಾಗಿದೆ.

ವಾಣಿಜ್ಯೋದ್ಯಮಿಗಳ ಮನವಿಯ ಮೇರೆಗೆ ವಾಣಿಜ್ಯ ಮತ್ತು ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಆದೇಶ ಹೊರಡಿಸಿದ್ದು, 28 ಬಗೆಯ ಅಗತ್ಯ ಉತ್ಪಾದನಾ ಕೈಗಾರಿಕೆಗಳು ಮತ್ತು 8 ಬಗೆಯ ನಿರಂತರ ಪ್ರಕ್ರಿಯೆ ನಡೆಸುವ ಉದ್ಯಮಗಳು ಲಾಕ್‌ಡೌನ್‌ ಇರುವ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬಹುದಾಗಿದೆ. ಉಕ್ಕು ಘಟಕಗಳು, ಪೆಟ್ರೋಲಿಯಂ ರಿಫೈನರಿ, ಸಿಮೆಂಟ್‌, ರಸಗೊಬ್ಬರ, ಗಾಜು ತಯಾರಿಕೆ ಮತ್ತು ಜವಳಿ ಘಟಕಗಳು ಪ್ರಮುಖವಾದವು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ನೆರೆಯ ಜಿಲ್ಲೆಗಳಾದ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲೂ ಕೈಗಾರಿಕಾ ಚಟುವಟಿಕೆಗಳನ್ನು ನಡೆಬಹುದು.

ಕಾರ್ಮಿಕರು ಮತ್ತು ಸಿಬ್ಬಂದಿ ಓಡಾಟಕ್ಕೆ ತಮ್ಮ ಕೈಗಾರಿಕಾ ಘಟಕಗಳು ನೀಡಿರುವ ಗುರುತಿನ ಚೀಟಿ ಬಳಸಬಹುದು ಎಂದು ಆದೇಶ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು