ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ: ಮಾದಾರ ಚನ್ನಯ್ಯ ಸ್ವಾಮೀಜಿಗೆ ಆಹ್ವಾನ

Last Updated 3 ಆಗಸ್ಟ್ 2020, 13:37 IST
ಅಕ್ಷರ ಗಾತ್ರ

ಚಿತ್ರದುರ್ಗ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಆಹ್ವಾನ ಬಂದಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಈ ಆಹ್ವಾನ ನೀಡಿದ್ದಾರೆ. ಮಂಗಳವಾರ ಸಂಜೆ 4ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸ್ವಾಮೀಜಿ ಲಕ್ನೋಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಅಯೋಧ್ಯೆ ತಲುಪಲಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಯ್ದ ಆಹ್ವಾನಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

‘ರಾಮಂದಿರದ ಭೂಮಿಪೂಜೆಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದೇನೆ. ಚಿತ್ರದುರ್ಗವನ್ನು ಪ್ರತಿನಿಧಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ. ಟ್ರಸ್ಟ್‌ ಸದಸ್ಯರು ದೂರವಾಣಿ ಮೂಲಕ ಆಹ್ವಾನ ನೀಡಿದ್ದಾರೆ’ ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT