ಕಲಬುರ್ಗಿ: ಕೊರೊನಾ ವೈರಸ್ ದೇಶ ಹಾಗೂ ರಾಜ್ಯದಲ್ಲಿ ವ್ಯಾಪಿಸಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಈ ಸಲದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.

ಕೋವಿಡ್ ಪರಿಣಾಮವಾಗಿ ಒಂದು ಕಡೆ ಸಾರ್ವಜನಿಕರು ಕೂಲಿ ಕಾರ್ಮಿಕರು ಸೇರಿದಂತೆ ಹಲವರು ತೀವ್ರ ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದು ಕಡೆ ಸಾವಿರಾರು ಸಂಖ್ಯೆಯ ಸೋಂಕಿತರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಹಾಗಾಗಿ ಈ ಸಲದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಪ್ರತಿವರ್ಷ ಹುಟ್ಟುಹಬ್ಬದ ಸಮಯದಲ್ಲಿ ಬಂದು ನೀವೆಲ್ಲ ಆಶೀರ್ವಾದ ನೀಡಿದ್ದೀರಿ. ಆದರೆ, ಈ ಸಲ ಕೋವಿಡ್ನಿಂದಾಗಿ ಪರಿಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಜುಲೈ 22ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಹಾಗಾಗಿ ಇದೇ ಜುಲೈ 21ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕೂಡ ಈ ಸಲ ನನ್ನ ಹುಟ್ಟುಹಬ್ಬ ಆಚರಿಸದೆ ಸೋಂಕಿತರ ಕುಟುಂಬದವರಿಗೆ ಕೈಲಾದ ಸಹಾಯ ನೀಡಬೇಕೆಂದು ಖರ್ಗೆ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.