ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ಹಣ ವಸೂಲಿ: ಅಪೊಲೊ ಆಸ್ಪತ್ರೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಸುಧಾಕರ್

Last Updated 29 ಜುಲೈ 2020, 6:33 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರೊಬ್ಬರಿಗೆ ₹5 ಲಕ್ಷ ಬಿಲ್‌ ಮಾಡಿರುವ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಬೆಂಗಳೂರಿನ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ಎಚ್ಚರಿಕೆ ಕೊಟ್ಟಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ ₹5 ಲಕ್ಷ ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಗಿದೆ’ ಎಂದು ತಿಳಿಸಿದ್ದಾರೆ.

‘ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿಯು ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಇಂದು ಆಪೊಲೊ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT