ಶಿವಮೊಗ್ಗ: ಮನೆಯ ಕೆಲಸಗಾರನಿಗೆ ಕೊರೊನಾ ಸೋಂಕು ಇರುವುದು ಖಚಿತವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

ಅವರ ಜತೆ ನಿಕಟ ಸಂಪರ್ಕದಲ್ಲಿದ್ದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸಹ ಜಿಲ್ಲಾಡಳಿತ ಭವನಕ್ಕೆ ಹಾಜರಾಗದೇ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಸಚಿವರ ಮನೆ ಕೆಲಸಗಾರನಿಗೆ ಸೋಂಕು ಇರುವುದು ಸೋಮವಾರ ದೃಢಪಟ್ಟಿತ್ತು. ಈಶ್ವರಪ್ಪ, ಶಿವಕುಮಾರ್ ಸೇರಿದಂತೆ 21 ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಎಲ್ಲರಿಗೂ ನೆಗೆಟಿವ್ ಬಂದಿದೆ.

ಶಿವಮೊಗ್ಗ ಜಿಲ್ಲೆಯಲ್ಲೂ ಮಂಗಳವಾರದಿಂದ ಪ್ರತಿ ದಿನ ಮಧ್ಯಾಹ್ನ 3ರ ನಂತರ ಲಾಕ್ಡೌನ್ ಜಾರಿ ಮಾಡಲಾಗಿದೆ. ಬೆಳಿಗ್ಗೆ 8ರಿಂದ ಮಧ್ಯಾಹ್ನ 3ರವರೆಗೂ ವ್ಯಾಪಾರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.