ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್‌ನಲ್ಲಿ ಶಿಕ್ಷಕರ ವರ್ಗಾವಣೆ: ಸಚಿವ ಸುರೇಶ್ ಕುಮಾರ್ 

Last Updated 31 ಜುಲೈ 2020, 9:50 IST
ಅಕ್ಷರ ಗಾತ್ರ

ಬೆಂಗಳೂರು: ಇಂದು ಅಧಿಕಾರಿಗಳೊಂದಿಗೆ ಸಭೆ‌ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಶಿಕ್ಷಕರ‌ ವರ್ಗಾವಣಾ ನಿಯಮಗಳನ್ನು ಶಿಕ್ಷಣ‌ ಇಲಾಖೆಅಂತಿಮಗೊಳಿಸಿದೆ. ಕಳೆದ ಅಧಿವೇಶನದಲ್ಲಿ ಈ ಕಾಯ್ದೆಗೆ ಅನುಮೋದನೆ ದೊರಕಿತ್ತು. ಶಿಕ್ಷಕ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದೆ’ ಎಂದು ಹೇಳಿದ್ದಾರೆ.

ಕಳೆದ ಬಾರಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೀಡಾಗಿದ್ದ ಶಿಕ್ಷಕರು ಈ‌ ಬಾರಿಯ ಮೊದಲ ಆದ್ಯತೆಯ ವರ್ಗಾವಣೆಯನ್ನು ಪಡೆಯಲಿದ್ದಾರೆ.

ಈ ಬಾರಿ ಆಗಸ್ಟ್ 2020 ರ ಮಾಹೆಯಿಂದ ಶಿಕ್ಷಕರ‌ ವರ್ಗಾವಣೆಯು ಅನುಷ್ಠಾನಗೊಳ್ಳಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT