ಶುಕ್ರವಾರ, ಆಗಸ್ಟ್ 6, 2021
21 °C

ಉಪನ್ಯಾಸಕರ ನೇಮಕಕ್ಕೆ ಶೀಘ್ರ ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಯು ಕಾಲೇಜುಗಳ ಉಪನ್ಯಾಸಕ ಹುದ್ದೆಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ಆದಷ್ಟು ಬೇಗ ಕೌನ್ಸೆಲಿಂಗ್‌ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್ ತಿಳಿಸಿದ್ದಾರೆ.

‘ಕೌನ್ಸೆಲಿಂಗ್ ಗೆ ಆರ್ಥಿಕ ಇಲಾಖೆ ಹಸಿರು ನಿಶಾನೆ ನೀಡಿದೆ. ಮುಖ್ಯಮಂತ್ರಿ ಅವರ ಅನುಮೋದನೆ ದೊರಕಿದ ತಕ್ಷಣ ಶೀಘ್ರ ದಿನಾಂಕ ಪ್ರಕಟಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಪಿಯು ಉಪನ್ಯಾಸಕರ ನೇಮಕಾತಿಗಾಗಿ 2018ರಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯ‌ಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿಯೂ ಅಂತಿಮವಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯದ ಕಾರಣಕ್ಕೆ ಕೌನ್ಸೆಲಿಂಗ್‌ ಮುಂದೂಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು