ಬುಧವಾರ, ಡಿಸೆಂಬರ್ 8, 2021
27 °C
ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ, ವಿಶೇಷ ಅಲಂಕಾರ

ಮಂತ್ರಾಲಯದಲ್ಲಿ ರಾಯರ ಆರಾಧನೆ

ಪಿ.ಹನುಮಂತು Updated:

ಅಕ್ಷರ ಗಾತ್ರ : | |

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀರಾಯರ 349ನೇ ಆರಾಧನಾ ಮಹೋತ್ಸವದ ಎರಡನೇ ದಿನ ಸೋಮವಾರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶ್ರೀಮೂಲರಾಮದೇವರ ಪೂಜೆ ನೆರವೇರಿಸಿದರು

ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 349ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಾತ್ರೋತ್ಸವ ಕಾರ್ಯಕ್ರಮಗಳು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಸರಳವಾಗಿ ಆರಂಭವಾಗಿವೆ.

ಎರಡನೇ ದಿನವಾದ ಸೋಮವಾರ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮೀಜಿ ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು. ಮಠದ ಪ್ರಾಕಾರದಲ್ಲಿ ದವಸ ಧಾನ್ಯ ಪೂಜೆ ನೆರವೇರಿಸಲಾಯಿತು. ಶ್ರೀಮೂಲರಾಮದೇವರ ಪೂಜೆ ಹಾಗೂ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆಯನ್ನು ಶ್ರೀಸುಬುಧೇಂದ್ರ ತೀರ್ಥರು ನೆರವೇರಿಸಿದರು.

ಪ್ರತಿವರ್ಷ ಮಹೋತ್ಸವಕ್ಕೆ ದೇಶದ ವಿವಿಧೆಡೆಯಿಂದ ಭಕ್ತರು ಬರುತ್ತಿದ್ದರು. ಈ ವರ್ಷ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಆಂಧ್ರಪ್ರದೇಶ ಸರ್ಕಾರ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಮಠದ ಸಿಬ್ಬಂದಿ ಮಾತ್ರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಆರಾಧನಾ ಮಹೋತ್ಸವದ ಪೂರ್ವಾರಾಧನೆ ಮಂಗಳವಾರ ನಡೆಯಲಿದೆ. ‘ಮಂತ್ರಾಲಯ ವಾಹಿನಿ’ಯು ಟ್ಯೂಬ್‌ ಚಾನಲ್‌  ಮೂಲಕ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು