ಬುಧವಾರ, ಜೂನ್ 16, 2021
22 °C

ಕರಾವಳಿಯಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

rain

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ.  ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ.  

ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. ಬೆಳಗಾವಿ ನಗರ, ಹಿರೇಬಾಗೇವಾಡಿ, ಗೋಕಾಕ, ರಾಯಬಾಗದಲ್ಲಿ ಸಾಧಾರಣ ಮಳೆಯಾಗಿದೆ.

ಧಾರವಾಡ ನಗರದ ಟೋಲ್‌ನಾಕಾ ಬಳಿ ರಸ್ತೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಜಿಲ್ಲೆಯ ಕಲಘಟಗಿ, ಅಳ್ನಾವರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು