ಬುಧವಾರ, ಸೆಪ್ಟೆಂಬರ್ 22, 2021
24 °C

ರಾಮಮಂದಿರಕ್ಕೆ ಭೂಮಿಪೂಜೆ ರಾಜ್ಯದಲ್ಲಿ ಕಟ್ಟೆಚ್ಚರ: ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮ ಮಂದಿರ ವಿನ್ಯಾಸ ಮಾದರಿ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಭೂಮಿ ಪೂಜೆ ನೆರವೇರಲಿದ್ದು, ಈ ವೇಳೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. 

ಈ ಬಗ್ಗೆ ರಾಜ್ಯದ ಎಲ್ಲ ಕಮಿಷನರ್‌ಗಳು ಹಾಗೂ ಜಿಲ್ಲಾ ಎಸ್ಪಿಗಳಿಗೆ ಸೂಚನೆ ನೀಡಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್‌ಕುಮಾರ್ ಪಾಂಡೆ, ‘ಭೂಮಿ ಪೂಜೆ ಅಂಗವಾಗಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಪೂಜೆ ನಡೆಸಲು ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ‍ಪೊಲೀಸರು ನೋಡಿಕೊಳ್ಳಬೇಕು’ ಎಂದಿದ್ದಾರೆ.

‘ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು. ಭೂಮಿ ಪೂಜೆ ನಡೆಯುವ ದಿನ ಕೆಲವು ಮತೀಯ ಸಂಘಟನೆಗಳು ಗಲಭೆ ಸೃಷ್ಟಿಸುವ ಸಾಧ್ಯತೆ ಇದೆ. ಅಂಥವರ ಮೇಲೆ ನಿಗಾವಹಿಸಬೇಕು’ ಎಂದೂ ತಿಳಿಸಿದ್ದಾರೆ.

ಭದ್ರತೆ ಬಗ್ಗೆ ಚರ್ಚಿಸಲು ಸೋಮವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು