ಸೋಮವಾರ, ಮೇ 17, 2021
21 °C
ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಸಭೆಯಲ್ಲಿ ಚರ್ಚೆ: ಪೇಜಾವರ ವಿಶ್ವಪ್ರಸನ್ನ ಶ್ರೀ

₹ 300 ಕೋಟಿ ವೆಚ್ಚದಲ್ಲಿ ಅಯೋಧ್ಯೆ ರಾಮಮಂದಿರ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ‘₹ 300 ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ₹ 1,000 ಕೋಟಿ ವೆಚ್ಚದಲ್ಲಿ 70 ಎಕರೆಯಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುವ ಬಗ್ಗೆ ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಶನಿವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಶ್ರೀಗಳು, ಮಂದಿರ ನಿರ್ಮಾಣಕ್ಕೆ ಬೇಕಾಗುವ ಹಣವನ್ನು ಕಂಪೆನಿಗಳ ಸಿಎಸ್‌ಆರ್ ನಿಧಿಯಿಂದ ಪಡೆದುಕೊಳ್ಳುವುದು ಹಾಗೂ ಒಬ್ಬ ವ್ಯಕ್ತಿಯಿಂದ ಕನಿಷ್ಠ ₹ 10, ಮನೆಯಿಂದ ₹ 100 ಸಂಗ್ರಹಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ನ.25 ರಿಂದ ಡಿ. 25ರವರೆಗೆ ವ್ಯಾಪಕ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಇದನ್ನೂ ಓದಿ: 

ರಾಮಮಂದಿರ ನಿರ್ಮಾಣ ಸಂಬಂಧ ಭೂಮಿಯ ಧಾರಣಾ ಸಾಮರ್ಥ್ಯ ಪರೀಕ್ಷಾ ಪ್ರಕ್ರಿಯೆ ಆರಂಭವಾಗಿದ್ದು, ಎಲ್‌ ಅಂಡ್‌ ಟಿ ಕಂಪೆನಿ ಮಂದಿರ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಿದೆ. 15 ದಿನದ ಮೊದಲು ಭೂಮಿ ಪೂಜೆಯ ದಿನವನ್ನು ಸಾರ್ವಜನಿಕವಾಗಿ ಘೋಷಿಸಲಾಗುವುದು. ಮಂದಿರ ನಿರ್ಮಾಣವಾಗುತ್ತಿರುವ 200 ಅಡಿಯ ಆಳದಲ್ಲಿ ತಾಮ್ರಪತ್ರ ಇರಿಸುವ ಬಗ್ಗೆಯೂ ಚರ್ಚೆ ನಡೆಯಿತು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು