ಭಾನುವಾರ, ಆಗಸ್ಟ್ 1, 2021
27 °C
ಕೇಂದ್ರ ಜಲಶಕ್ತಿ ಸಚಿವರ ಜೊತೆ ಮಾತುಕತೆ

ಮೇಕೆದಾಟು ಪ್ರಸ್ತಾವಕ್ಕೆ ಒಪ್ಪಿಗೆ ಕೊಡಿ: ಜಾರಕಿಹೊಳಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್ ಅವರನ್ನು ಭೇಟಿಯಾದ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಮೇಕೆದಾಟು ಯೋಜನೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸುವಂತೆ ಮನವಿ ಮಾಡಿದರು. ದೆಹಲಿಗೆ ತೆರಳಿದ್ದ ಅವರು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಸುರೇಶ ಅಂಗಡಿ ಅವರ ಜತೆ ಶೆಖಾವತ್ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದರು.

ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಒದಗಿಸಲು ಅನುಕೂಲವಾಗುವಂತೆ 4.75 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಬಳಕೆ ಮಾಡಿಕೊಳ್ಳುವ ಸದುದ್ದೇಶದಿಂದ ಮೇಕೆದಾಟು ಬಳಿ ಸಮಾನಾಂತರ ಅಣೆಕಟ್ಟು ನಿರ್ಮಿಸಲಾಗುತ್ತಿದೆ. ಯೋಜನೆಗೆ ಕೂಡಲೇ ಅನುಮೋದನೆ ಕೊಡಿಸುವಂತೆ ಶೆಖಾವತ್ ಅವರನ್ನು ಕೋರಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕೆ ಅವಶ್ಯವಿರುವ ಅಧಿಸೂಚನೆಯನ್ನು ಕೂಡಲೇ ಹೊರಡಿಸಬೇಕು ಹಾಗೂ  ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು ಎಂದೂ ಅವರು ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು