ಭಾನುವಾರ, ಆಗಸ್ಟ್ 1, 2021
27 °C

ನಿವೃತ್ತ ಡಿಜಿಪಿ ಸುಶಾಂತ್ ಮಹಾಪಾತ್ರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಿವೃತ್ತ ಡಿಜಿಪಿ ಸುಶಾಂತ್ ಮಹಾಪಾತ್ರ (64) ಶುಕ್ರವಾರ ನಿಧನರಾದರು.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಾರತ್ತಹಳ್ಳಿಯ ಸಕ್ರಾ ವರ್ಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ತೀರಿಕೊಂಡಿದ್ದಾರೆ.

1979ನೇ ಐಪಿಎಸ್ ಬ್ಯಾಚ್ ಅಧಿಕಾರಿಯಾಗಿದ್ದ ಮಹಾಪಾತ್ರ, 2016ರ ಡಿಸೆಂಬರ್‌ನಲ್ಲಿ ನಿವೃತ್ತರಾಗಿದ್ದರು. ನಂತರ ಬೆಳ್ಳಂದೂರು ಬಳಿ ನೆಲೆಸಿದ್ದರು. ಅವರಿಗೆ ಪುತ್ರಿ ಹಾಗೂ ಪುತ್ರ ಇದ್ದಾರೆ.

‘ಸುಶಾಂತ್ ಮಹಾಪಾತ್ರ ಅವರ ಗಂಟಲಿನ ದ್ರವದ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಶನಿವಾರ ಬೆಳಿಗ್ಗೆ ಅಂತ್ಯ ಸಂಸ್ಕಾರ ನಡೆಸಲಾಗುವುದು’ ಎಂದು ಆಪ್ತರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು