ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಇ ದಾಖಲಾತಿ: ಪರಿಷ್ಕೃತ ವೇಳಾಪಟ್ಟಿ

Last Updated 23 ಜುಲೈ 2020, 19:28 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ (2020–21) ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಶಾಲಾ ದಾಖಲಾತಿಯ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕರಿಸಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದವರಿಗೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಜುಲೈ 29ರಂದು ನಡೆಯಲಿದೆ. 30ರಿಂದ ಆಗಸ್ಟ್‌ 8ರವರೆಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಮೊದಲ ಸುತ್ತಿನಲ್ಲಿ ಶಾಲೆಗಳಿಗೆ ದಾಖಲಾದ ಮಕ್ಕಳ ವಿವರವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ.

ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ.17ರಂದು ನಡೆಯಲಿದ್ದು, ದಾಖಲಾತಿ ಪ್ರಕ್ರಿಯೆ 18ರಿಂದ 25ರವರೆಗೆ ಜರುಗಲಿದೆ. ದಾಖಲಾದ ವಿದ್ಯಾರ್ಥಿಗಳ ವಿವರವನ್ನು ಇದೇ ಅವಧಿಯಲ್ಲಿ ತಂತ್ರಾಂಶದಲ್ಲಿ ದಾಖಲಿಸಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT