ಗುರುವಾರ , ಜುಲೈ 7, 2022
22 °C

ಸಾರಿಗೆ ಸಿಬ್ಬಂದಿಗೆ ವೇತನ ಬಿಡುಗಡೆ: ಡಿಸಿಎಂ ಸವದಿ ಘೋಷಣೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಯ ವೇತನಕ್ಕಾಗಿ ₹961 ಕೋಟಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. 

ಈಗಾಗಲೇ ಜೂನ್‌ ಮತ್ತು ಜುಲೈ ಸಂಬಳಕ್ಕಾಗಿ ₹426 ಕೋಟಿ ಬಿಡುಗಡೆ ಮಾಡಲಾಗಿದೆ. ಜೂನ್‌ ತಿಂಗಳಿಂದ ಸೆಪ್ಟೆಂಬರ್‌ ವರೆಗೆ ಒಟ್ಟು 4 ತಿಂಗಳು ವೇತನ ಭರಿಸಲು ಸರ್ಕಾರದ ಈ ನಿರ್ಧಾರಿಂದ ಅನುಕೂಲವಾದಂತಾಗಿದೆ ಎಂದು ಸವದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೂಡಲೇ ವೇತನ ಬಿಡುಗಡೆ ಮಾಡಬೇಕೆಂಬ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗೆ ಸವದಿ ವಂದನೆಗಳನ್ನು ಅರ್ಪಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು