ಭಾನುವಾರ, ಆಗಸ್ಟ್ 1, 2021
27 °C
ಪ್ರಥಮ ಪಿಯು ಪೂರಕ ಪರೀಕ್ಷೆ ರದ್ದು

ದ್ವಿತೀಯ ಪಿಯು ಫಲಿತಾಂಶ ಇಂದು | ಬೆಳಿಗ್ಗೆ 11.30ಕ್ಕೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಮಂಗಳವಾರ ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‍ಗೇ  ಫಲಿತಾಂಶದ ಸಂದೇಶ ರವಾನೆಯಾಗಲಿದೆ.

‘ಇಲಾಖೆಯ ವೆಬ್‌ಸೈಟ್‌ನಲ್ಲಿ (www.karresults.nic.in) ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಸೋಮವಾರ ತಿಳಿಸಿದರು.

ಪೂರಕ ಪರೀಕ್ಷೆ ರದ್ದು: ‘ಇದೇ 16ರಿಂದ ನಿಗದಿಯಾಗಿದ್ದ ಪ್ರಥಮ ಪಿಯು ಪೂರಕ ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. 60 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಿತ್ತು. ಎಲ್ಲಾ ವಿಷಯಗಳ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳೂ ದ್ವಿತೀಯ ಪಿಯುಗೆ ತೇರ್ಗಡೆಗೊಳ್ಳುವರು. ಪರೀಕ್ಷೆಗೆ ಗೈರಾದವರಿಗೆ ದ್ವಿತೀಯ ಪಿಯು ಕಿರು ಪರೀಕ್ಷೆಗೆ ಮೊದಲು ಪರೀಕ್ಷೆ ನಡೆಸಲಾಗುವುದು. ಹಾಜರಾತಿಯ ಕೊರತೆಯಿಂದ ಪರೀಕ್ಷೆಗೆ ಹಾಜರಾಗದವರಷ್ಟೇ ಅನುತ್ತೀರ್ಣಗೊಳ್ಳುವರು’ ಎಂದು ಸಚಿವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು