ಶುಕ್ರವಾರ, ಜುಲೈ 30, 2021
20 °C

ರಾಮನಗರ | ಸಕಾಲಕ್ಕೆ ಚಿಕಿತ್ಸೆ ಸಿಗದೆ ಏಳು ತಿಂಗಳ ಹೆಣ್ಣು ಮಗು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯ ಚನ್ನಪಟ್ಟಣದಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಏಳು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ.

ನಗರದ ಪೇಟೆ ಬೀದಿ ನಿವಾಸಿ ಪ್ರದೀಪ್ ಅವರ ಪುತ್ರಿಗೆ ಬೆಳಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಮೊದಲಿಗೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಮಕ್ಕಳ ತಜ್ಞರು ಲಭ್ಯವಿಲ್ಲದ ಕಾರಣ ಮಕ್ಕಳ ತಜ್ಞ ರಾಜಣ್ಣ ಬಳಿ, ಹಾಗೂ ನಂತರದಲ್ಲಿ ಬಿ.ಜಿ. ಲಿಂಗೇಗೌಡ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗೆ ಅಲೆದಿದ್ದಾರೆ.

ಆದರೆ, ಎಲ್ಲಿಯೂ ಚಿಕಿತ್ಸೆ ದೊರಕಿಲ್ಲ. ಮಗು ಮೃತಪಟ್ಟಿರುವುದಾಗಿ ಲಿಂಗೇಗೌಡ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಕಡೆಯ ಪ್ರಯತ್ನ ಎಂಬಂತೆ ಪೋಷಕರು ಮತ್ತೆ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು