ಭಾನುವಾರ, ಸೆಪ್ಟೆಂಬರ್ 26, 2021
27 °C

ಸಿಂಧೂ ಬಿ.ರೂಪೇಶ್‌ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

siddaramaiah

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಶಹಬ್ಬಾಸ್‌ ಯಡಿಯೂರಪ್ಪನವರೇ. ಒಂದೆಡೆ ಕೊರೊನಾ ವಾರಿಯರ್ಸ್‌ಗೆ ಆಕಾಶದಿಂದ ಹೂ ಮಳೆ ಸುರಿಸುತ್ತೀರಿ. ಇನ್ನೊಂದೆಡೆ ಕೊಲೆ ಬೆದರಿಕೆ ಎದುರಿಸುತ್ತಿರುವ ಅಧಿಕಾರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡುತ್ತೀರಿ. ಇದೇನಾ ಕೊರೊನಾ ಸೇನಾನಿಗಳಿಗೆ ಕೊಡುವ ಗೌರವ’ ಎಂದು ಅವರು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

‘ಕೊರೊನಾ ಅಕ್ರಮ ಬಯಲಿಗಳೆದರೆ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡುತ್ತೀರಿ ಎಂದು ದೂರುತ್ತೀರಿ. ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದ್ದೀರಿ. ಈಗ ಕೋಮುವಾದಿಗಳ ರಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ’ ಎಂದೂ ಕೇಳಿದ್ದಾರೆ.

 
 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು