ಗುರುವಾರ , ಆಗಸ್ಟ್ 6, 2020
25 °C
ಮಡಿಕೇರಿಯ ಶಿಕ್ಷಕಿ ಕವಿತಾಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ,ಎಸ್ಸೆಸ್ಸೆಲ್ಸಿ ಮಕ್ಕಳ ತಾಯಿ:ಸಚಿವ ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ತಾಯಿಯ ನಿಧನದ ದುಃಖದಲ್ಲೂ, ಸೋಮವಾರ ಮಡಿಕೇರಿಯ ಸೇಂಟ್ ಮೈಕಲ್ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆ ತೋರಿದ್ದ ಶಿಕ್ಷಕಿ ಕವಿತಾ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಅವರು‌ ಧನ್ಯವಾದ ತಿಳಿಸಿದ್ದಾರೆ. 

‘ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು, ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲ್ಲೂಕಿನ ಶಿಕ್ಷಕಿ ಶ್ರೀಮತಿ ಕವಿತಾ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು. ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ, ಎಸ್ಸೆಸ್ಸೆಲ್ಸಿ ಮಕ್ಕಳ ತಾಯಿ ಸಹ ಎಂದು ತೋರಿದ್ದಾರೆ’ ಎಂದು ಸಚಿವರು ಹೇಳಿದ್ದಾರೆ. 

ಶಿಕ್ಷಕಿ ಕವಿತಾ ಅವರ ತಾಯಿ, ತಾಲ್ಲೂಕಿನ ಬೆಟ್ಟಗೇರಿಯಲ್ಲಿ ಸೋಮವಾರ ಮುಂಜಾನೆ ನಿಧನರಾಗಿದ್ದರು. ಮೌಲ್ಯಮಾಪನ ಕಾರ್ಯ ಮುಗಿದ ಮೇಲೆ ಶಿಕ್ಷಕಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ... ತಾಯಿ ನಿಧನದ ದುಃಖದಲ್ಲೂ ಕರ್ತವ್ಯ ಪ್ರಜ್ಞೆ ತೋರಿದ ಶಿಕ್ಷಕಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು