ಸೋಮವಾರ, ಆಗಸ್ಟ್ 3, 2020
21 °C

ವ್ಯಕ್ತಿ ಪೂಜೆಗಿಂತ ಪಕ್ಷಪೂಜೆ ಮುಖ್ಯ : ಎಸ್‌.ಟಿ. ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ST Somashekar

ಬೆಂಗಳೂರು: ‘ಜನರ ದಿಕ್ಕು ತಪ್ಪಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಉತ್ತರ ಕೊಡುವ ಸಮರ್ಥರಿಗೆ ಪಕ್ಷದ ಪದಾಧಿಕಾರಿ ಸ್ಥಾನ ನೀಡಲಾಗಿದ್ದು, ವ್ಯಕ್ತಿಪೂಜೆಗಿಂತ ಪಕ್ಷ ಪೂಜೆ ಮುಖ್ಯ ಎಂಬುದನ್ನು ತೋರಿಸಿದಂತಾಗಿದೆ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದ್ದಾರೆ.

‘ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ನೇತೃತ್ವದ ಸರ್ಕಾರಗಳ ಜನಪರ ಯೋಜನೆಗಳನ್ನು ಜನಪ್ರಿಯ ಗೊಳಿಸಲು ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು ಅನುಭವಿಗಳು, ಹಿರಿಯರು–ಕಿರಿಯರು ಇರುವ ಸಂಘಟನಾ ತಂಡವನ್ನು ರಚಿಸಿದ್ದಾರೆ. ಈ ತಂಡದೊಂದಿಗೆ ನಿಂತು ಪಕ್ಷ ಕಟ್ಟಲು ಸಚಿವರೆಲ್ಲರೂ ನೆರವಾಗುತ್ತೇವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು