ಗುರುವಾರ , ಜುಲೈ 29, 2021
24 °C

‘ಸಹಕಾರ ಸಂಘಗಳ ಚುನಾವಣೆ ಡಿಸೆಂಬರ್‌ವರೆಗೆ ಮುಂದೂಡಿಕೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕ್‌ಗಳ ಚುನಾವಣೆಯನ್ನು ಡಿಸೆಂಬರ್‌ವರೆಗೆ ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಈ ಸಂಬಂಧ ಸಹಕಾರ ಇಲಾಖೆ ಅಧಿಕೃತ ಆದೇಶವನ್ನೂ ಹೊರಡಿಸಿದೆ. ಆಡಳಿತ ಮಂಡಳಿಗಳ ಅವಧಿ ಮುಕ್ತಾಯವಾಗಿದ್ದರೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಲಾಕ್‌ಡೌನ್‌ ಸಂದರ್ಭದಲ್ಲಿ ಒಮ್ಮೆ ಚುನಾವಣೆ ಮುಂದೂಡಲಾಗಿತ್ತು. ಲಾಕ್‌ಡೌನ್‌ ಸಡಿಲಿಸಿದ ಬಳಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಈಗಾಗಲೇ ಚುನಾವಣಾ ವೇಳಾ ಪಟ್ಟಿ ಹೊರಡಿಸಿ, ಚುನಾವಣಾ ಪ್ರಕ್ರಿಯೆ ಬಾಕಿ
ಇದ್ದಲ್ಲಿ, ತಕ್ಷಣದಿಂದಲೇ ‍ಪ್ರಕ್ರಿಯೆ ರದ್ದುಪಡಿಸಬೇಕು. ಅವಧಿ ಮುಗಿದಿರುವ ಮತ್ತು ಮುಗಿಯಲಿರುವ ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು