ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ ರಹಿತ ಆರೋಪಗಳನ್ನು ಜನ ನಂಬುವುದಿಲ್ಲ: ಸಿದ್ದರಾಮಯ್ಯಗೆ ಸುಧಾಕರ್ ತಿರುಗೇಟು

Last Updated 23 ಜುಲೈ 2020, 10:04 IST
ಅಕ್ಷರ ಗಾತ್ರ

ಬೆಂಗಳೂರು:‘ಕೋವಿಡ್‌ ನಿರ್ವಹಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ಹಿಂದೆಂದೂ ನೋಡಿರಲಿಲ್ಲ’ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿದ್ದ ಆರೋಪಕ್ಕೆ. ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್‌ ಟ್ವಿಟರ್‌ ಮೂಲಕ ತಿರುಗೇಟು ನೀಡಿದ್ದಾರೆ.

‘ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಿಜಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನೀಕ’ ಎಂದು ಕುಟುಕಿದ್ದಾರೆ.

ಮುಂದುವರಿದು,‘ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ’ ಎಂದು ತಿರುಗೇಟು ನೀಡಿದ್ದಾರೆ.

‘ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ’ ಎಂದು ಹೇಳಿದ್ದಾರೆ.

‘ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ರೂ. ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ ಅಷ್ಟು. ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ?’ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT