ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ರ ಮುಂಜಾನೆ 5ರ ವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿ

Last Updated 25 ಜುಲೈ 2020, 16:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಜುಲೈ 25ರ ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ ಲಾಕ್‌ಡೌನ್‌ ಜಾರಿಯಾಗಿದೆ.

ಜನ ಮನೆಗಳಿಂದ ಹೊರ ಬಾರದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಭಾಸ್ಕರ್‌ ರಾವ್‌, ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಜನರಲ್ಲಿ ಮನವಿ ಮಾಡಿದ್ದಾರೆ.

ಲಾಕ್‌ಡೌನ್‌ನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಎಲ್ಲ ಜಿಲ್ಲೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಜೀವನಾವಶ್ಯಕ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲ ಸೇವೆಗಳ ಚಟುವಟಿಕೆಯನ್ನು ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ ನಿರ್ಬಂಧಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಹೇಳಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಭಾನುವಾರ ಲಾಕ್‌ಡೌನ್‌ ವೇಳೆ ಎಲ್ಲರೂ ಮನೆಗಳಲ್ಲೇ ಇರಿ. ಸುರಕ್ಷಿತವಾಗಿರಿ. ಕೊರೊನಾ ವೈರಸ್‌ನ ಸರಪಳಿ ಮುರಿಯುವುದು ನಿಮ್ಮ ಕೈಲಿದೆ. ನಿಮ್ಮ ಸುರಕ್ಷೆತೆಗಾಗಿ ನಾವು ಹೊರಗಿರುತ್ತೇವೆ,’ ಎಂದು ಬೆಂಗಳೂರು ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಟ್ವೀಟ್‌ ಮಾಡಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT