ಸೋಮವಾರ, ಜುಲೈ 26, 2021
26 °C

ಜಲಪಾತ ವೀಕ್ಷಣೆಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಉಂಚಳ್ಳಿ ಜಲಪಾತದ ವೀಕ್ಷಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸ್ಥಳೀಯ ಗ್ರಾಮ ಅರಣ್ಯ ಸಮಿತಿ ತಿಳಿಸಿದೆ. ಪ್ರತಿ ದಿನ ಸಾವಿರಾರು ಪ್ರವಾಸಿಗರು ಈ ಜಲಪಾತ ನೋಡಲು ಬರುತ್ತಾರೆ. ಇದರಿಂದ ಸ್ಥಳೀಯರಿಗೆ ಆತಂಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಆಗ್ರಹದ ಮೇರೆಗೆ, ಜಲಪಾತ ವೀಕ್ಷಣೆಗೆ ತೆರಳುವ ಮಾರ್ಗದಲ್ಲಿ ತಡೆ ಹಾಕಲಾಗಿದೆ. ಪ್ರವಾಸಿಗರು ಸಹಕರಿಸಬೇಕು ಎಂದು ಗ್ರಾಮ ಅರಣ್ಯ ಸಮಿತಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.