ಬೆಂಗಳೂರು: 24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು,‘ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ ಆಗಲಾರದೇ’ ಎಂದಿದ್ದಾರೆ.

'ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ’ ಎಂದಿದ್ದಾರೆ.

‘ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿ ಸರ್ಕಾರ ನಮ್ಮ ಕೆಲಸವನ್ನು ಸುಲಭ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ. ಕೋರ್ಟ್‌ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ’ ಎಂದು ಪ್ರಶ್ನಿಸಿದ್ದಾರೆ.

‘24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿ ಹೇಳಿ 24 ದಿನ ಕಳೆದುಹೋಗಿದೆ. ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ?’

‘ಅಕ್ರಮದ ಬಗ್ಗೆ ಮುಖ್ಯಮಂತ್ರಿಯನ್ನು ಪ್ರಶ್ನಿಸಿದರೆ ‘ಮಾಹಿತಿ ಕೊಡಿ’ ಎನ್ನುತ್ತಾರೆ. ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ. ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ. ಜನರ ಬಳಿ ಹೋಗದೆ ನಮಗೆ ಬೇರೆ ದಾರಿ ಏನಿದೆ’

‘ರಾಜ್ಯದ ಜನ ಜನ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಪೂರೈಕೆ ಯಂತ್ರಗಳಿಲ್ಲ, ಊಟ-ತಿಂಡಿ ಇಲ್ಲ, ಉದ್ಯೋಗ ಇಲ್ಲ ಎಂದು ಗೋಳಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ, ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಗಳಿಸಬಹುದಾದ ದುಡ್ಡು ಕಾಣ್ತು...‘

‘ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಪನ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ನಾವು ಸುಮ್ಮನಿರಬೇಕಾ?’

‘ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ.’

‘ಜನರ ಕಷ್ಟದ ಕಾಲದಲ್ಲಿ ವಿರೋಧ ಪಕ್ಷಗಳು ಸಹಕಾರ ನೀಡಬೇಕು. ಆರೋಪ ಮಾಡುವುದು ಸರಿಯೇ ಎಂದು ಬಿಎಸ್ ಯಡಿಯೂರಪ್ಪ ಕೇಳ್ತಿದ್ದಾರೆ. ಇಂಥ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

‘ನಮ್ಮಿಂದ ಸಹಕಾರ ನಿರೀಕ್ಷಿಸುವ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಬಿಜೆಪಿ ಯಾಕೆ ಸಹಕಾರ ಕೊಡಲಿಲ್ಲ. ರಾಜಸ್ಥಾನದ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟಿದ್ದು ಯಾಕೆ’ ಎಂದು ಪ್ರಶ್ನಿಸಿದ್ದಾರೆ.

ವೆಂಟಿಲೇಟರ್ ರಫ್ತಿಗೆ ಅವಕಾಶ–ಕಿಡಿ
‘ಕರ್ನಾಟಕದಲ್ಲಿ ಪ್ರತಿದಿನ 5,000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ. ಸಚಿವ ಡಾ. ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಹೃದಯಹೀನ ಸರ್ಕಾರ’ ಎಂದು ಜರಿದಿದ್ದಾರೆ.

‘ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 57,396. ಲಭ್ಯ ಇರುವ ವೆಂಟಿಲೇಟರ್‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ನರೇಂದ್ರ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.