ಶನಿವಾರ, ಆಗಸ್ಟ್ 15, 2020
27 °C

ಸಚಿವ ಸುಧಾಕರ್‌ ತಂದೆಗೆ ಜ್ವರ, ಕೆಮ್ಮು: ಕೋವಿಡ್‌ ಪರೀಕ್ಷೆ, ವರದಿಯ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರ ತಂದೆ ಪಿ.ಎನ್‌ ಕೇಶವರೆಡ್ಡಿ ಅವರಿಗೆ ಜ್ವರ ಮತ್ತು ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ  ಕುರಿತು ಸ್ವತಃ ಸುಧಾಕರ್‌ ಅವರೇ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. 

‘ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು