ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲಿನ ಉತ್ಪನ್ನಗಳ ಆಮದು ಬೇಡ: ಶಾಸಕರ ಒತ್ತಾಯ

Last Updated 12 ಅಕ್ಟೋಬರ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪದಾರ್ಥಗಳ ಪಟ್ಟಿಯಲ್ಲಿ ಹಾಲಿನ ಉತ್ಪನ್ನಗಳನ್ನು ಸೇರಿಸಿರುವುದನ್ನು ಕೈಬಿಡಬೇಕು ಎಂದು ವಿಧಾನಸಭೆಯಲ್ಲಿ ಎಲ್ಲ ಪಕ್ಷಗಳ ಸದಸ್ಯರು ಕೇಂದ್ರವನ್ನು ಒತ್ತಾಯಿಸಿದರು.

ಬಜೆಟ್‌ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್‌ನ ಅಮರೇಗೌಡ ಬೈಯ್ಯಾಪುರ ವಿಷಯ ಪ್ರಸ್ತಾಪಿಸಿ, ಕೇಂದ್ರ ಸರ್ಕಾರ ಹಾಲಿನ ಆಮದಿಗೆ ಅನುಮತಿ ನೀಡಿದೆ. ಇದರಿಂದ ರಾಜ್ಯದ ಹಾಲು ಉತ್ಪಾದಕರಿಗೆ ತೊಂದರೆ ಆಗುತ್ತದೆ ಎಂದರು.

ಆಗ ಬಿಜೆಪಿಯ ಜಿ. ಸೋಮಶೇಖರ ರೆಡ್ಡಿ ಮಧ್ಯ ಪ್ರವೇಶಿಸಿ, ಹಾಲಿನ ಆಮದಿಗೆ ಅನುಮತಿ ನೀಡಿಲ್ಲ. ಹಾಲಿನ ಕೆಲವು ಉತ್ಪನ್ನಗಳ ಆಮದಿಗೆ ಅನುಮತಿ ನೀಡಿದೆ ಎಂದರು.

ಜೆಡಿಎಸ್‌ನ ವೆಂಕಟರಾವ್‌ ನಾಡಗೌಡ ಮಾತನಾಡಿ, ಕರ್ನಾಟಕ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಹಾಲು ಅಥವಾ ಹಾಲಿನ ಉತ್ಪನ್ನಗಳ ಆಮದು ಬೇಡ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT