ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಹಾರ್‌ ಜೈಲಿನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ, ಮನಮೋಹನ್‌ ಸಿಂಗ್‌

ಐಎನ್ಎಕ್ಸ್ ಮೀಡಿಯಾ ಹಗರಣ
Last Updated 23 ಸೆಪ್ಟೆಂಬರ್ 2019, 5:47 IST
ಅಕ್ಷರ ಗಾತ್ರ

ನವದೆಹಲಿ:ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ(74) ಅವರನ್ನು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಮತ್ತು ಕಾಂಗ್ರಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಭೇಟಿಯಾದರು.

ಸೆಪ್ಟೆಂಬರ್‌ 5ರಿಂದ ತಿಹಾರ್ ಕೇಂದ್ರ ಕಾರಾಗೃಹದಲ್ಲಿರುವಚಿದಂಬರಂ ಅವರನ್ನು ಸೋನಿಯಾ ಗಾಂಧಿ, ಮನಮೋಹನ್‌ ಸಿಂಗ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಾಜಿ ಹಣಕಾಸು ಸಚಿವ ಚಿದಂಬರಂ ಪುತ್ರ, ಸಂಸದ ಕಾರ್ತಿ ಚಿದಂಬರಂ ಸಹ ಕಾಂಗ್ರೆಸ್‌ ನಾಯಕರೊಂದಿಗೆ ತಿಹಾರ್‌ ಜೈಲಿಗೆ ಭೇಟಿ ನೀಡಿದ್ದರು.

ಕಳೆದ ವಾರ ಕಾಂಗ್ರೆಸ್‌ ಮುಖಂಡರಾದ ಗುಲಾಮ್‌ ನಬಿ ಆಜಾದ್‌ ಮತ್ತು ಅಹಮದ್‌ ಪಟೇಲ್‌ ತಿಹಾರ್‌ ಜೈಲಿನಲ್ಲಿ ಚಿದಂಬರಂ ಅವರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದರು.

ಚಿದಂಬರಂ ಅವರ ಟ್ವಿಟರ್‌ ಖಾತೆಯು ಕಾರ್ಯಾಚರಿಸುತ್ತಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳು ಪ್ರಕಟಗೊಳ್ಳುತ್ತಿವೆ. ‘ಕಾಂಗ್ರೆಸ್‌ ಪಕ್ಷ ಎಲ್ಲಿಯವರೆಗೂ ಪ್ರಬಲಮತ್ತು ಧೈರ್ಯವಾಗಿರುವುದೋ ಆ ವರೆಗೂ ನಾನೂ ಸಹ ಧೈರ್ಯದಿಂದಿರುವೆ‘ ಎಂದು ಟ್ವೀಟಿಸಿದ್ದಾರೆ.

ನನ್ನ ತಂದೆ ಮತ್ತು ನನ್ನ ಕುಟುಂಬ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಆಭಾರಿಯಾಗಿದೆ ಎಂದು ಕಾರ್ತಿ ಚಿದಂಬರಂ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT