ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ

ಭಾರತ ವಿರೋಧಿ ಘೋಷಣೆ ಕೂಗಿದ ಆರೋಪ
Last Updated 13 ಅಕ್ಟೋಬರ್ 2018, 16:06 IST
ಅಕ್ಷರ ಗಾತ್ರ

ಅಲಿಗಡ, ಉತ್ತರ ಪ್ರದೇಶ:ಭಾರತ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಕಾಶ್ಮೀರದಲ್ಲಿ ಎನ್‌ಕೌಂಟರ್‌ಗೆ ಬಲಿಯಾದ ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ಬಶೀರ್ ವಾನಿ ಕುರಿತ ಪ್ರಾರ್ಥನಾ ಸಭೆ ಆಯೋಜಿಸಲು ಮುಂದಾಗಿದ್ದ ಆರೋಪವೂ ಇವರ ಮೇಲಿದೆ.

ಕಾಶ್ಮೀರದ ಮೂವರು ವಿದ್ಯಾರ್ಥಿಗಳು ಭಾರತ ವಿರೋಧಿ ಘೋಷಣೆ ಕೂಗುತ್ತಿರುವ ವಿಡಿಯೊ ಪರಿಶೀಲಿಸಿದ ಬಳಿಕ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ವಾಸಿಮ್ ಮಲಿಕ್, ಅಬ್ದುಲ್ ಮಿರ್ ಹಾಗೂ ಮತ್ತೊಬ್ಬ ವಿದ್ಯಾರ್ಥಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅನಧಿಕೃತವಾಗಿ ಸಭೆ ಸೇರಿದ್ದಕ್ಕೆ ಕಾರಣ ಕೇಳಿ ಒಂಬತ್ತು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ವಕ್ತಾರ ಸಫಾಯ್ ಕಿದ್ವಾಯಿ ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದ್ದು, ಮೂರು ದಿನಗಳಲ್ಲಿ ವರದಿ ನೀಡುವಂತೆ ಕೇಳಲಾಗಿದೆ. ಮೂವರೂ ವಿದ್ಯಾರ್ಥಿಗಳನ್ನು ಈ ಮೊದಲು ಅಮಾನತುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT