ತ್ರಿವಳಿ ತಲಾಖ್ ಹೊಸ ಮಸೂದೆಗೆ ಸಂಪುಟ ಒಪ್ಪಿಗೆ

ಬುಧವಾರ, ಜೂನ್ 26, 2019
23 °C

ತ್ರಿವಳಿ ತಲಾಖ್ ಹೊಸ ಮಸೂದೆಗೆ ಸಂಪುಟ ಒಪ್ಪಿಗೆ

Published:
Updated:

ನವದೆಹಲಿ: ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಹಿಂದಿನ ಎನ್‌ಡಿಎ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯ ಬದಲಾಗಿ ಈ ಕಾಯ್ದೆ ಜಾರಿಯಾಗಲಿದೆ. ಸೋಮವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ ಎಂದು ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದರು.

ಆಧಾರ್‌ ತಿದ್ದುಪಡಿ ಮಸೂದೆ: ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್ ಸಿಮ್ ಸಂಪರ್ಕ ಪಡೆಯಲು ಆಧಾರ್ ಕಾರ್ಡನ್ನು ಐಚ್ಛಿಕವಾಗಿ ಬಳಸುವ ತಿದ್ದುಪಡಿ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಸಾರ್ವಜನಿಕ ಹಿತಾಸಕ್ತಿಯಿಂದ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಹಾಗೂ ಆಧಾರ್ ದುರ್ಬಳಕೆಯನ್ನು ತಡೆಯಲು ಯುಐಡಿಎಐಗೆ ಈ ಕಾಯ್ದೆ  ಸಹಕಾರಿಯಾಗಲಿದೆ. ವ್ಯಕ್ತಿಯು ತನ್ನ ಗುರುತು ಸಾಬೀತುಪಡಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಿಲ್ಲ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ. ಆದರೆ ಆಧಾರ್ ಬಳಕೆ ಮೇಲೆ ಇರುವ ನಿರ್ಬಂಧಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ಮಸೂದೆ ಅವಕಾಶ ನೀಡಿದೆ. 

ರಾಷ್ಟ್ರಪತಿ ಆಡಳಿತ ವಿಸ್ತರಣೆ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಮತ್ತೆ 6 ತಿಂಗಳು ವಿಸ್ತರಿಸಲಾಗಿದೆ. ಸಂಪುಟ ಸಭೆಯು ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದ್ದು, ರಾಷ್ಟ್ರಪತಿ ಸಹಿ ಹಾಕಿದ ಬಳಿ ಜುಲೈ 3ರಿಂದ ಜಾರಿಯಾಗಲಿದೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 14

  Happy
 • 0

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !