ಶುಕ್ರವಾರ, ಡಿಸೆಂಬರ್ 6, 2019
19 °C

ಮಸೂದ್‌ ಅಜರ್‌ ಉಗ್ರ ಪಟ್ಟಿಗೆ: ಶೀಘ್ರದಲ್ಲೇ ಗೊಂದಲ ನಿವಾರಣೆ–ಚೀನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜೈಷೆ–ಎ– ಮೊಹಮ್ಮದ್‌ ಉಗ್ರ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿ  ಚೀನಾ ಅಡ್ಡಗಾಲು ಹಾಕುತ್ತಿರುವುದಕ್ಕೆ ಸಂಬಂಧಿಸಿದಂತೆ ಈ ಗೊಂದಲ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಚೀನಾ ಭಾನುವಾರ ಹೇಳಿದೆ. 

ಭಾರತದಲ್ಲಿರುವ ಚೀನಾದ ರಾಯಭಾರಿ ಲುವೊ ಝಾಹೋಯಿ ಅವರು ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಹೋಳಿ ಹಬ್ಬದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ಕುರಿತು ಎದ್ದಿರುವ ಗೊಂದಲ ಶೀಘ್ರದಲ್ಲೇ ಬಗೆಹರಿಯಲಿದೆ, ತಾಂತ್ರಿಕ ಕಾರಣಕ್ಕೆ ತಡೆ ನೀಡಲಾಗಿದೆ. ಈ ವಿಷಯದ ಬಗ್ಗೆ ವಿಸ್ತೃತ ಚರ್ಚೆಗೆ ಇನ್ನೂ ಅವಕಾಶವಿದೆ ಎಂದು ಅವರು ಹೇಳಿದ್ದಾರೆ.  

ಕಳದ ನಾಲ್ಕು ದಿನಗಳ ಹಿಂದೆ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವುದಕ್ಕೆ ಚೀನಾ ವಿಶ್ವಸಂಸ್ಥೆಯಲ್ಲಿ ತಡೆವೊಡ್ಡಿತ್ತು. ಮಸೂದ್‌ ಅಜರ್‌ ನೇತೃತ್ವದ ಜೈಷೆ–ಎ– ಮೊಹಮ್ಮದ್‌ ಉಗ್ರ ಸಂಘಟನೆ ಪುಲ್ವಾಮಾದಲ್ಲಿ ಆತ್ಮಹತ್ಯೆ ಬಾಂಬ್ ದಾಳಿ ನಡೆಸಿ 40 ಯೋಧರನ್ನು ಹತ್ಯೆ ಮಾಡಿತ್ತು. ಈ ಹಿನ್ನೆಯಲ್ಲಿ ಭಾರತ, ಜೈಷೆ–ಎ– ಮೊಹಮ್ಮದ್‌ ಉಗ್ರ ಸಂಘಟನೆಯನ್ನು ಜಾಗತಿಕವಾಗಿ ನಿಷೇಧಿಸಬೇಕು ಎಂದು ವಿಶ್ವಸಂಸ್ಥೆಯಲ್ಲಿ ಬಲವಾದ ವಾದ ಮಂಡಿಸಿತ್ತು. 

ಈಗಾಗಲೇ ಭಾರತದ ನಡೆಗೆ ಅಮೆರಿಕ, ಫ್ರಾನ್ಸ್‌, ಜರ್ಮನಿ ಮತ್ತು ಬ್ರಿಟನ್‌ ದೇಶಗಳು ಬೆಂಬಲ ಸೂಚಿಸಿದ್ದು ಚೀನಾ ಮಾತ್ರ ಅಡ್ಡಗಾಲು ಹಾಕುತ್ತಿದೆ. ವಿಶ್ವಸಂಸ್ಥೆಯಲ್ಲಿ ಚೀನಾ ನಾಲ್ಕನೇ ಬಾರಿ ಉಗ್ರ ಮಸೂದ್‌ ಅಜರ್‌ನನ್ನು ಉಗ್ರ ಪಟ್ಟಿಗೆ ಸೇರಿಸಲು ವಿರೋಧ ವ್ಯಕ್ತಪಡಿಸಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು