ಗುರುವಾರ , ನವೆಂಬರ್ 14, 2019
18 °C

ಲಡಾಖ್‌ ಬಗ್ಗೆ ಭಾರತದ ನಿರ್ಧಾರ ನಮ್ಮ ಸಾರ್ವಭೌಮತ್ವಕ್ಕೆ ಧಕ್ಕೆ: ಚೀನಾ

Published:
Updated:

ನವದೆಹಲಿ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಘೊಷಣೆ ಮಾಡಿರುವುದು ಭಾರತ ಮತ್ತು ಚೀನಾ ದೇಶಗಳ ನಡುವಿನ ವಾಗ್ವಾದಕ್ಕೆ ದಾರಿ ಮಾಡಿಕೊಟ್ಟಿದೆ.  

'ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದು  ಕಾನೂನು ಬಾಹಿರ, ಈ ಪ್ರದೇಶದಲ್ಲಿ ಚೀನಾ ಆಡಳಿತಕ್ಕೆ ಒಳಪಟ್ಟ ಭೂ ಪ್ರದೇಶಗಳಿವೆ, ಭಾರತ ಸರ್ಕಾರವು ಲಡಾಖ್‌ನ ಬಗ್ಗೆ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರವು ಚೀನಾದ ಸಾರ್ವಭೌಮತ್ವಕ್ಕೆ  ಧಕ್ಕೆಯಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್‌ ಶುಂಗ್‌ ಹೇಳಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯವು ‘ಜಮ್ಮು ಮತ್ತು ಕಾಶ್ಮೀರದ ಪುನರ್ ವಿಂಗಡಣೆಯು ನಮ್ಮ ಆಂತರಿಕ ವಿಚಾರ, ನಮ್ಮ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯಾಗಿದ್ದು ಇದನ್ನು ಬೇರೆ ದೇಶಗಳು ಗೌರವಿಸ ಬೇಕು ಎಂದು ಹೇಳಿದೆ. 

ಚೀನಾ ಅಕ್ರಮವಾಗಿ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನ ಕೆಲವು ಪ್ರದೇಶಗಳನ್ನು ಆಕ್ರಮಿಸಿ ಕೊಂಡಿದೆ. ಇದು ಮಾತ್ರವಲ್ಲ, ಪಾಕ್‌ ಆಕ್ರಮಿತ ಕಾಶ್ಮೀರದ ಕೆಲವು ಪ್ರದೇಶಗಳನ್ನು ಅಕ್ರಮವಾಗಿ ಸ್ವಾಧೀನ ಪಡಿಸಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಪ್ರತಿಕ್ರಿಯಿಸಿ (+)