ಗುರುವಾರ , ಮಾರ್ಚ್ 4, 2021
18 °C

ನಿಮ್ಮ ಧೈರ್ಯ ಕೆಲವರಿಗಷ್ಟೆ ಇರಲು ಸಾಧ್ಯ: ಪ್ರಿಯಾಂಕ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಿಮ್ಮ ಧೈರ್ಯ ಕೆಲವರಿಗಷ್ಟೆ ಇರಲು ಸಾಧ್ಯ, ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಗುರುವಾರ ಟ್ವೀಟ್‌ ಮಾಡಿದ್ದಾರೆ. 

ಬುಧವಾರ ರಾಹುಲ್‌ ಗಾಂಧಿ, ನಾನು ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆ ತೊರೆದಿದ್ದೇನೆ. ಹೊಸ ನಾಯಕನನ್ನು ತಡ ಮಾಡದೇ ಕೂಡಲೇ ಪಕ್ಷ ಆಯ್ಕೆ ಮಾಡಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದರು. 

ಇದಕ್ಕೆ ರೀ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ ’ನಿಮ್ಮ ಧೈರ್ಯ ಕೆಲವರಿಗಷ್ಟೆ ಇರಲು ಸಾಧ್ಯ, ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ‘ ಎಂದು ಟ್ವೀಟ್‌ ಮಾಡುವ ಮೂಲಕ ರಾಹುಲ್‌ ಗಾಂಧಿ ಅವರ ಧೈರ್ಯವನ್ನು ಮೆಚ್ಚಿದ್ದಾರೆ.  

ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಅದನ್ನು ಪಕ್ಷದ ಕಾರ್ಯಕಾರಿ ಸಮಿತಿ ಇನ್ನೂ ಅಂಗೀಕರಿಸಿಲ್ಲ. ಈ ನಡುವೆ ಕಾಂಗ್ರೆಸ್‌ ಮುಖ್ಯಮಂತ್ರಿಗಳೆಲ್ಲರೂ ರಾಹುಲ್‌ ಗಾಂಧಿ ಮೇಲೆ ಒತ್ತಡ ಹೇರುತ್ತಿದ್ದು, ಪಕ್ಷದ ಅಧ್ಯಕ್ಷ ಸ್ಥಾನವನ್ನು ತೊರೆಯದಂತೆ ಮನವಿ ಮಾಡಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು