ಮಸೀದಿಗಳಲ್ಲಿ ಮಹಿಳೆಯರ ಪ್ರಾರ್ಥನೆಗೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌ 

ಬುಧವಾರ, ಏಪ್ರಿಲ್ 24, 2019
23 °C

ಮಸೀದಿಗಳಲ್ಲಿ ಮಹಿಳೆಯರ ಪ್ರಾರ್ಥನೆಗೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌ 

Published:
Updated:

ನವದೆಹಲಿ: ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿ ಪುಣೆ ಮೂಲದ ದಂಪತಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಕೇಂದ್ರ ಸರ್ಕಾರ ಮತ್ತು ಮಹಿಳಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಮಹಿಳೆಯರಿಗೆ ಮಸೀದಿ ಪ್ರವೇಶಕ್ಕಿರುವ ನಿಷೇಧವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಈ ಸಂಬಂಧ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಅಖಿಲ ಭಾರತ  ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗಳು ಸೇರಿದಂತೆ ಕೇಂದ್ರೀಯ ವಕ್ಫ್ ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ.

ಮಹಿಳೆಯರಿಗೆ ಮಸೀದಿ ಪ್ರವೇಶ ನಿಷೇಧ ಎನ್ನುವುದು ಸಮಾನ ಮತ್ತು ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಪುರುಷರಂತೆ ಮಹಿಳೆಯರಿಗೆ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು. ಕಳೆದ ಸೆಪ್ಟೆಂಬರ್ ತಿಂಗಳು ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಸುಪ್ರೀಂಕೋರ್ಟ್‌ ಅವಕಾಶ ಕಲ್ಪಿಸಿದೆ ಅದರಂತೆ ಮುಸ್ಲಿಂ ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಅರ್ಜಿದಾರರು ವಾದಿಸಿದ್ದಾರೆ.  

ಪುಣೆ ಮೂಲದ ಯಾಸ್ಮಿನ್‌ ಜುಬೇರ್ ಮತ್ತು ಜುಬೇರ್ ನಾಜೀರ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದ 32ನೇ ವಿಧಿಯು ಧಾರ್ಮಿಕ ಆಚರಣೆಗಳಲ್ಲಿ ಪುರುಷರ ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಇರಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ. 

ಬರಹ ಇಷ್ಟವಾಯಿತೆ?

  • 14

    Happy
  • 0

    Amused
  • 0

    Sad
  • 0

    Frustrated
  • 3

    Angry

Comments:

0 comments

Write the first review for this !