ಗುರುವಾರ , ಫೆಬ್ರವರಿ 20, 2020
27 °C
ಅಗಸ್ಟಾವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣ

ಹಗರಣದಲ್ಲಿ ಸೋನಿಯಾ ಹೆಸರಿಸಲು ಪ್ರಧಾನಿಯಿಂದ ಒತ್ತಡ: ಕಾಂಗ್ರೆಸ್‌ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಆಗಸ್ಟಾವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಒಪ್ಪಂದ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧ ಪಕ್ಷದ ನಾಯಕರ ವಿರುದ್ಧ ‘ಸಂಯೋಜಿತ ‍ಪಿತೂರಿ’ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಗುರುವಾರ ಆರೋಪಿಸಿದೆ.

ಹೆಲಿಕಾಪ್ಟರ್‌ ಖರೀದಿ ಒಪ್ಪಂದದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮಧ್ಯಪ್ರವೇಶಿಸಿದ್ದರೆಂದು ಈ ಒಪ್ಪಂದದ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕೆಲ್‌ ಅವರಿಂದ ಸುಳ್ಳು ಹೇಳಿಸಲು ಪ್ರಧಾನಿ ಒತ್ತಡ ಹಾಕಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೆವಾಲಾ ಆರೋಪ ಮಾಡಿದ್ದಾರೆ.

‘ಸೋನಿಯಾ ಗಾಂಧಿಯವರನ್ನು ಹೆಸರಿಸಿರುವ ಸುಳ್ಳು ತಪ್ಪೊಪ್ಪಿಗೆಗೆ ಸಹಿ ಹಾಕುವಂತೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಮೈಕೆಲ್‌ ಮೇಲೆ ಒತ್ತಡ ಹೇರಲಾಗುತ್ತಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಲು ಪ್ರಧಾನಿಯೊಬ್ಬರು ಸುಳ್ಳು ಸಾಕ್ಷ್ಯಗಳನ್ನು ಸಂಪಾದಿಸಲು ಮುಂದಾಗಿರುವುದು ದೇಶದ ಇತಿಹಾಸದಲ್ಲಿ ಹಿಂದೆಂದೂ ಆಗಿರಲಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ದುಬೈ ನ್ಯಾಯಾಲಯಕ್ಕೆ ಇದುವರೆಗೆ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಲು ಭಾರತೀಯ ತನಿಖಾ ಸಂಸ್ಥೆಗಳು ವಿಫಲವಾಗಿವೆ. ವಿರೋಧ ಪಕ್ಷದ ನಾಯಕರ ವಿರುದ್ಧ ಪಿತೂರಿ ನಡೆಸಲು ಮತ್ತು ತಮ್ಮ ಉದ್ದೇಶ ಸಾಧನೆಗಾಗಿ ಕ್ರಿಶ್ಚಿಯನ್ ಮೈಕೆಲ್ ಅವರನ್ನು ಒಂದು ಸಾಧನವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಅವರು ದೂರಿದ್ದಾರೆ.

ಒಂದು ತಿಂಗಳ ಹಿಂದೆಯೇ ದುಬೈನಲ್ಲಿ ಮೈಕೆಲ್ ಅವರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಭಾರತದ ವಶಕ್ಕೆ ಪಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು