ಸೋಮವಾರ, ಸೆಪ್ಟೆಂಬರ್ 28, 2020
29 °C

ಸಂಸತ್‌ ಗ್ರಂಥಾಲಯದಲ್ಲಿ ‘ಸುಧಾ’ ವಾರಪತ್ರಿಕೆ ಇರಲಿ: ಅನಂತಕುಮಾರ್ ಹೆಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಸಮೂಹದ ಸಹ ಪ್ರಕಟಣೆಯಾದ ‘ಸುಧಾ’ ವಾರಪತ್ರಿಕೆಯು ಸಂಸತ್‌ನ ಗ್ರಂಥಾಲಯದಲ್ಲಿ ಓದುಗರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಮನವಿ ಮಾಡಿದ್ದಾರೆ.

ವಿವಿಧ ಪ್ರಾದೇಶಿಕ ಭಾಷೆಗಳ ಪತ್ರಿಕೆಗಳು ಮತ್ತು ನಿಯತಕಾಲಿಕಗಳು ಗ್ರಂಥಾಲಯದಲ್ಲಿ ಹೇರಳವಾಗಿ ದೊರೆಯುತ್ತವೆ. ಆದರೆ, ಕನ್ನಡದ ವಾರಪತ್ರಿಕೆಗಳು ಕಾಣುವುದೇ ಕಷ್ಟ. ಓದುಗರಿಗೆ ಕನ್ನಡದ ವಾರಪತ್ರಿಕೆಗಳೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಸಂಸತ್‌ನ ಗ್ರಂಥಾಲಯದ ನಿರ್ದೇಶಕರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಆಶಯ ಮತ್ತು ಸಂಸತ್‌ನ ಗ್ರಂಥಾಲಯದ ನಿರ್ದೇಶಕರಿಗೆ ಬರೆದ ಪತ್ರದ ಪ್ರತಿಯನ್ನು ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು