ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಷ್ಮಾನ್ ಭಾರತ್‌‘ ಯೋಜನೆಯಡಿ 10 ಲಕ್ಷ ಜನರಿಗೆ ಚಿಕಿತ್ಸೆ

Last Updated 1 ಫೆಬ್ರುವರಿ 2019, 10:38 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವದಲ್ಲೇ ಅತ್ಯಂತ ಬೃಹತ್‌ ಆರೋಗ್ಯ ಯೋಜನೆಯಾದ ‘ಆಯುಷ್ಮಾನ್ ಭಾರತ್‌’ ಆರಂಭವಾದಾಗಿನಿಂದ ಈವರೆಗೂ ಸುಮಾರು 10 ಲಕ್ಷ ಜನರು ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ ಎಂದು ಹಂಗಾಮಿ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಹೇಳಿದರು.

ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಜನೌಷಧಿ ಕೇಂದ್ರಗಳ ಮೂಲಕವೂ ಸರ್ಕಾರ ಅತ್ಯಂತ ಕಡಿಮೆ ದರದಲ್ಲಿ ಔಷಧ ಒದಗಿಸುತ್ತಿದೆ ಎಂದು ತಿಳಿಸಿದರು.

ಮತ್ತೊಂದು ಏಮ್ಸ್‌

ದೇಶದಾದ್ಯಂತ 21 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳನ್ನು (ಏಮ್ಸ್‌) ಸ್ಥಾಪಿಸಲಾಗಿದೆ. 2014ರಲ್ಲಿ 14 ಏಮ್ಸ್‌ಗಳನ್ನು ಆರಂಭಿಸಲಾಗಿತ್ತು. ಈಗ ಇನ್ನೊಂದು ಏಮ್ಸ್‌ ಅನ್ನು ಹರಿಯಾಣದಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT